ನ್ಯೂಸ್ ಆ್ಯರೋ : ಬಂಟ್ವಾಳದ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ತೆಂಕ ಮಿಜಾರು ನಿವಾಸಿ ದಿನೇಶ ಸೇಮಿತ(23) ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿವರ ತಿಳಿದು ಬಂದಿಲ್ಲ.
ಇವರು ಮೂಡುಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ವೇಳೆ, ಬಿ.ಸಿ.ರೋಡಿನಿಂದ ಮೂಡುಬಿದ್ರೆಗೆ ಹೋಗುತ್ತಿದ್ದ ಬೀಡಿ ಸಂಸ್ಥೆಯೊಂದರ ಗೂಡ್ಸ್ ಟೆಂಪೋ ಢಿಕ್ಕಿಯಾಗಿದೆ. ಬೈಕ್ ಸವಾರನ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೆಲ್ಕಾರ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..