1. Home
  2. Accident
  3. News
  4. ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ KSRTC ಬಸ್ – ಓವರ್ ಟೇಕ್ ಧಾವಂತವೇ ಅವಘಢಕ್ಕೆ ಕಾರಣ

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ KSRTC ಬಸ್ – ಓವರ್ ಟೇಕ್ ಧಾವಂತವೇ ಅವಘಢಕ್ಕೆ ಕಾರಣ

ಕಡಬ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿದ KSRTC ಬಸ್ – ಓವರ್ ಟೇಕ್ ಧಾವಂತವೇ ಅವಘಢಕ್ಕೆ ಕಾರಣ
0

ನ್ಯೂಸ್ ಆ್ಯರೋ : ಕೆ.ಎಸ್.ಆರ್.ಟಿ ಸಿ ಬಸ್ ಒಂದು ರಸ್ತೆ ಬಿಟ್ಟು ಹಳ್ಳಕ್ಕೆ ಜಾರಿ ಬಿದ್ದ ಘಟನೆ ಕಡಬ ತಾಲೂಕಿನ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ KA21 F0047 ಬಸ್ ಓವರ್ಟೇಕ್ ಮಾಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಕೆಲವೇ ದೂರದಲ್ಲಿ ವಿದ್ಯುತ್ ಕಂಬ ಹಾಗೂ ಮರ ಒಂದು ಇದ್ದು ಸ್ವಲ್ಪದರಲ್ಲೇ ಭಾರಿ ಅನಾಹುತ ಒಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..