ನ್ಯೂಸ್ ಆ್ಯರೋ : ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಸುಹೈಲ್ ಅವರು ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬಂಟ್ವಾಳ ಪೇಟೆಯಾಗಿ ಬೆಳ್ತಂಗಡಿಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಈ ಅಪಘಾತ ನಡೆದಿದೆ.
ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್ ಭಾಗದಲ್ಲಿ ಧರ್ಮಸ್ಥಳ ರಸ್ತೆಗೆ ಕ್ರಾಸಿಂಗ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ರು ತಿಳಿಸಿದ್ದಾರೆ.
ಇದೊಂದು ಅವೈಜ್ಞಾನಿಕ ರೀತಿಯ ಕ್ರಾಸಿಂಗ್ ಆಗಿದ್ದು ಅನೇಕ ಬಾರಿ ಈ ಭಾಗದಲ್ಲಿ ಅಪಘಾತಗಳು ನಡೆದು ಪ್ರಾಣಹಾನಿ ಕೂಡ ಸಂಭವಿಸಿದೆ. ಅಗತ್ಯವಿಲ್ಲದ ರಸ್ತೆ ಗಳಲ್ಲಿ ರಸ್ತೆ ಹಂಪ್ಸ್ ಗಳನ್ನು ಹಾಕುವ ಬದಲು ಇಂತಹ ಅಪಘಾತಗಳು ನಡೆಯುವ ರಸ್ತೆಯಲ್ಲಿ ಹಂಪ್ಸ್ ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..