1. Home
  2. Accident
  3. News
  4. ಬಂಟ್ವಾಳ : ಬಸ್ ಹಾಗೂ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ – ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಗಂಭೀರ

ಬಂಟ್ವಾಳ : ಬಸ್ ಹಾಗೂ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ – ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಗಂಭೀರ

ಬಂಟ್ವಾಳ : ಬಸ್ ಹಾಗೂ ಎರಡು ಕಾರ್ ಗಳ ನಡುವೆ ಭೀಕರ ಅಪಘಾತ – ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಗಂಭೀರ
0

ನ್ಯೂಸ್ ಆ್ಯರೋ‌ : ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡು ಉಳಿದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರ ವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ‌

ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. 112 ಹೊಯ್ಸಳ ಪೋಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..