1. Home
  2. Accident
  3. News
  4. ವಿಟ್ಲ : ಕಾರು ಮತ್ತು ಲಾರಿ ಮಧ್ಯೆ ರಸ್ತೆ ಅಪಘಾತ – ಕಾರ್ ನಲ್ಲಿದ್ದ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ವಿಟ್ಲ : ಕಾರು ಮತ್ತು ಲಾರಿ ಮಧ್ಯೆ ರಸ್ತೆ ಅಪಘಾತ – ಕಾರ್ ನಲ್ಲಿದ್ದ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ವಿಟ್ಲ : ಕಾರು ಮತ್ತು ಲಾರಿ ಮಧ್ಯೆ ರಸ್ತೆ ಅಪಘಾತ –  ಕಾರ್ ನಲ್ಲಿದ್ದ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
0

ನ್ಯೂಸ್ ಆ್ಯರೋ : ಕಾರು ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಳಿಕೆ ಸಮೀಪದ ಸಿ.ಪಿ.ಸಿ.ಆರ್.ಐ. ಸಮೀಪ ನಡೆದಿದೆ.

ವಿಟ್ಲ ಭಾಗದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪುತ್ತೂರು ಕಡೆಯಿಂದ ವಿಟ್ಲ ಭಾಗಕ್ಕೆ ತೆರಳುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ಮಂಜೇಶ್ವರ ನಿವಾಸಿಗಳಾದ ಅಬ್ದುಲ್ ಗಫುರ್ ಹಾಗೂ ಹುಸೈನ್ ಎಂಬವರು ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ. ಕಾರು ಆಟೋ ರಿಕ್ಷಾವೊಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ‌ ದಾಖಲು ಮಾಡಲಾಗಿದೆ. ಸ್ಥಳಕ್ಕೆ ತೆರಳಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..