1. Home
  2. Auto-News
  3. ಓಲಾ, ಉಬರ್ ಸಂಸ್ಥೆಗಳಿಗೆ ಬಿಗ್ ರಿಲೀಫ್, ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ – ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

ಓಲಾ, ಉಬರ್ ಸಂಸ್ಥೆಗಳಿಗೆ ಬಿಗ್ ರಿಲೀಫ್, ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ – ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ

ಓಲಾ, ಉಬರ್ ಸಂಸ್ಥೆಗಳಿಗೆ ಬಿಗ್ ರಿಲೀಫ್, ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ – ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ
0

ನ್ಯೂಸ್ ಆ್ಯರೋ : ಓಲಾ, ಊಬರ್ ಸಂಸ್ಥೆಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಓಲಾ-ಊಬರ್ ಆಟೋಗಳು ರಸ್ತೆಗಿಳಿಯದಂತೆ ಸರ್ಕಾರ ನೀಡಿದ್ದ ಆದೇಶಕ್ಕೆ ಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ಹೈಕೋರ್ಟ್ ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದೆ.

ಓಲಾ, ಊಬರ್ ಸಂಸ್ಥೆಗಳು ಲೈಸೆನ್ಸ್ ಪಡೆಯದೆ, ಟ್ಯಾಕ್ಸಿಗಳಿಗೆ ಪಡೆದಿದ್ದ ಲೈಸೆನ್ಸ್ ಅಡಿಯಲ್ಲೇ ಆಟೋ ಓಡಿಸುತ್ತಿದ್ದವು. ಅಲ್ಲದೆ ಮೂರು ಪಟ್ಟು ಹೆಚ್ಚು ಹಣ ವಸೂಲಿಗಿಳಿದಿದ್ದವು. ಇದಕ್ಕೆ ಕ್ರಮ ಕೈಗೊಳ್ಳಲು ಮುಂದಾದ ಸಾರಿಗೆ ಇಲಾಖೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿತ್ತು‌. ಸಾರಿಗೆ ಇಲಾಖೆ ಮತ್ತು ಓಲಾ-ಊಬರ್ ಸಂಸ್ಥೆಗಳ ಜೊತೆ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಓಲಾ-ಊಬರ್ ಆಟೋಗಳು ರಸ್ತೆಗಿಳಿಯುವಂತಿಲ್ಲ. ಇಳಿದರೆ 5 ಸಾವಿರ ದಂಡ ಹಾಕುವುದಾಗಿ ಸಾರಿಗೆ ಇಲಾಖೆ ಎಚ್ಚರಿಸಿತ್ತು. ಪರವಾನಗಿ ಪಡೆದ ಬಳಿಕವಷ್ಟೇ ಆಟೋಗಳನ್ನು ಚಲಾಯಿಸಬಹುದು. ಅದೂ ಕೂಡಾ ಸಾರಿಗೆ ಇಲಾಖೆ ನಿಗದಿ ಪಡಿಸಿದ ದರದಲ್ಲೇ ಆಟೋ ಓಡಿಸಬೇಕೆಂಬ ನಿಯಮ ಹಾಕಲಾಗಿತ್ತು.

ಆದ್ರೆ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಓಲಾ, ಊಬರ್ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ. ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್‌ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿದ್ದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್ ಸಾರಿಗೆ ಇಲಾಖೆ ಆದೇಶಕ್ಕೆ ಮಧ್ಯಂತರ ತಡೆ ವಿಧಿಸಿದೆ.

ಇನ್ನು, ಓಲಾ, ಊಬರ್ ಕಂಪನಿ ಅನುಕೂಲಕರ ದರವನ್ನು ವಿಧಿಸಬೇಕು ಎಂದು ಆದೇಶಿರುವ ಹೈಕೋರ್ಟ್, ಪರವಾನಗಿ ನೀಡಲು ಕಾಲಾವಕಾಶ ವಿಸ್ತರಿಸಬೇಕು ಎಂದು ಸೂಚಿಸಿದೆ. 2021ರಲ್ಲಿ ಸಾರಿಗೆ ಇಲಾಖೆ ನಿಗದಿಪಡಿಸಿದ ದರವನ್ನು ಪಾಲಿಸಬೇಕು. ಹೆಚ್ಚುವರಿ ಸೇವೆಯ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. 10 ರಿಂದ 15 ದಿನದ ಒಳಗೆ ಸರ್ಕಾರ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..