1. Home
  2. Bantwal
  3. ಬಂಟ್ವಾಳ ‌: 15 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣ – ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು

ಬಂಟ್ವಾಳ ‌: 15 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣ – ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು

ಬಂಟ್ವಾಳ ‌: 15 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣ – ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು
0

ನ್ಯೂಸ್ ಆ್ಯರೋ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2007 ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕೇರಳದ ಬಂದ್ಯೋಡು ಎಂಬಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತನನ್ನು ಮಂಜೇಶ್ವರ ಕುಂಜತ್ತೂರು ಗ್ರಾಮದ ತೂಮಿನಾಡು ನಿವಾಸಿ ಯಾಕುಬ್ ಎಂಬವರ ಪುತ್ರ ಮಹಮ್ಮದ್ ಫಾರೂಕ್ ಯಾನೆ ಫಾರೂಕ್ ಎಂದು ಗುರುತಿಸಲಾಗಿದೆ.

ಬುಧವಾರ ಆರೋಪಿಯ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಅಲ್ಲಿನ ಪೊಲೀಸರ ಸಹಕಾರದಲ್ಲಿ ಬಂಟ್ವಾಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಫಾರೂಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..