1. Home
  2. Bantwal
  3. ವಿಟ್ಲ : ವೀರಕಂಬ ಬಳಿ ಟಿಪ್ಪರ್ – ಬೈಕ್ ಮಧ್ಯೆ ಅಪಘಾತ ಪ್ರಕರಣ – ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಸಾವು

ವಿಟ್ಲ : ವೀರಕಂಬ ಬಳಿ ಟಿಪ್ಪರ್ – ಬೈಕ್ ಮಧ್ಯೆ ಅಪಘಾತ ಪ್ರಕರಣ – ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಸಾವು

ವಿಟ್ಲ : ವೀರಕಂಬ ಬಳಿ ಟಿಪ್ಪರ್ – ಬೈಕ್ ಮಧ್ಯೆ ಅಪಘಾತ ಪ್ರಕರಣ – ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಸಾವು
0

ನ್ಯೂಸ್ ಆ್ಯರೋ‌ : ವಿಟ್ಲ ಸಮೀಪದ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನ ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಮಾಣಿಲ ನಿವಾಸಿ ಮನೋಜ್ ಪೂಜಾರಿ (26 ವ.)ಮೃತ ದುರ್ದೈವಿ. ಮೃತರು ಅಮರ್‌ ಕನ್ಸ್ ಸ್ಟ್ರಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಕಳೆದ ಡಿ.3ರಂದು ರಾತ್ರಿ ವೇಳೆ ಅಪಘಾತ ಸಂಭವಿಸಿತ್ತು. ಅಪಘಾತದಿಂದಾಗಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು. ವಿಟ್ಲ ಕಡೆಯಿಂದ ಬಂದ ಟಿಪ್ಪರ್ ಲಾರಿ ಬೇರೊಂದು ವಾಹನವನ್ನು ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಮನೋಜ್ ರವರನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮನೋಜ್ ರವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತ ನಡೆದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೇಮನಾಥ ಎಂಬವರಿಗೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..