1. Home
  2. Bantwal
  3. ಬಂಟ್ವಾಳ ‌: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ, ಅಶಾಂತಿ ಸೃಷ್ಟಿ ‌- ಇಬ್ಬರ ಬಂಧನ

ಬಂಟ್ವಾಳ ‌: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ, ಅಶಾಂತಿ ಸೃಷ್ಟಿ ‌- ಇಬ್ಬರ ಬಂಧನ

ಬಂಟ್ವಾಳ ‌: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ, ಅಶಾಂತಿ ಸೃಷ್ಟಿ ‌- ಇಬ್ಬರ ಬಂಧನ
0

ನ್ಯೂಸ್ ಆ್ಯರೋ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ,ಸಿ ರೋಡ್ ನ ಪರ್ಲಿಯಾದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್ ಹಾಗೂ ಅಹಮ್ಮದ್ ಸೈಫ್ ಗಾಂಜಾ ಸೇವನೆಯ ಪ್ರಕರಣದ ಬಂಧಿತ ಆರೋಪಿಗಳು.

ಈ ಇಬ್ಬರು ಆರೋಪಿಗಳು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಗಾಂಜಾ ಸೇವನೆ ಮಾಡ್ತ ಇದ್ದಿದ್ದು ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿ ಅಶಾಂತಿ ಹಬ್ಬಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಗಾಂಜಾ ಸೇವೆನೆ ಮಾಡಿದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾರೆ‌.

ಆ ಬಳಿಕ ಇವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ಖಾತರಿಯಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ‌‌ ವಿಧಿಸಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..