ನ್ಯೂಸ್ ಆ್ಯರೋ : ವಿಟ್ಲ ಸಮೀಪದ ಪುಣಚ ಗ್ರಾಮ ಪಂಚಾಯತ್ ಗೆ ಬಂದಿದ್ದ ಹಿಂದೂ ಯುವತಿಗೆ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಪುಣಚ ಗ್ರಾಮ ಪಂಚಾಯತ್‌ನ ಸ್ವಚ್ಚತಾ ಸಿಬ್ಬಂದಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ಕಳೆದ ಶುಕ್ರವಾರ ಸಂತ್ರಸ್ತ ಯುವತಿ ಪುಣಚ ಪಂಚಾಯತ್ ಗೆ ಕಾರ್ಯನಿಮಿತ್ತ ಭೇಟಿ ನೀಡಿದ್ದ ವೇಳೆ ಪಕ್ಕದ ಶೌಚಾಲಯಕ್ಕೆ ತೆರಳಿದ್ದು, ಈ ವೇಳೆ ಅಲ್ಲಿಗೆ ತೆರಳಿದ ಆರೋಪಿ ಉಸ್ಮಾನ್ ಕೈ ಹಿಡಿದೆಳೆದು ಅಸಭ್ಯವಾಗಿ ವರ್ತಿಸಿದ್ದಾನೆಂದು ಯುವತಿ ಆರೋಪಿಸಿದ್ದಾರೆ.
ಇಂದು ಸಂತ್ರಸ್ತ ಯುವತಿ ವಿಟ್ಲ ಪೋಲಿಸರಿಗೆ ಘಟನೆಯ ಸಂಬಂಧ ದೂರು ನೀಡಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಉಸ್ಮಾನ್ ನನ್ನು ಪೋಲಿಸರು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..