1. Home
  2. Bantwal
  3. ವಿಟ್ಲ‌ : ವಿಷ ಸೇವಿಸಿ ‌ವಿವಾಹಿತ‌ ಮಹಿಳೆ ಆತ್ಮಹತ್ಯೆ ‌- ಸಾವಿಗೆ ಕಾರಣ ನಿಗೂಢ…

ವಿಟ್ಲ‌ : ವಿಷ ಸೇವಿಸಿ ‌ವಿವಾಹಿತ‌ ಮಹಿಳೆ ಆತ್ಮಹತ್ಯೆ ‌- ಸಾವಿಗೆ ಕಾರಣ ನಿಗೂಢ…

ವಿಟ್ಲ‌ : ವಿಷ ಸೇವಿಸಿ ‌ವಿವಾಹಿತ‌ ಮಹಿಳೆ ಆತ್ಮಹತ್ಯೆ ‌- ಸಾವಿಗೆ ಕಾರಣ ನಿಗೂಢ…
0

ನ್ಯೂಸ್ ಆ್ಯರೋ‌ : ವಿವಾಹಿತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ರವರ ಪತ್ನಿ ಸವಿತ ಯಾನೆ ಸೇಸಮ್ಮ (50 ವ.) ರವರು ಮೃತಪಟ್ಟವರು.

ಸೇಸಮ್ಮ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಡಪಡಿಸಿರುವುದಾಗಿ ಅವರ ಸಂಬಂದಿಕರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ಕೇಪು ಗ್ರಾಮದ ವಳಕಟ್ಟೆ ನಿವಾಸಿ ಚಂದ್ರಶೇಖರ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..