1. Home
  2. Bantwal
  3. ಬಂಟ್ವಾಳ : ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳವಿಗೆ ಯತ್ನ – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ

ಬಂಟ್ವಾಳ : ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳವಿಗೆ ಯತ್ನ – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ

ಬಂಟ್ವಾಳ : ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಳವಿಗೆ ಯತ್ನ – ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ
0

ನ್ಯೂಸ್ ಆ್ಯರೋ : ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕೊಡಪದವು ಶಾಖೆಯಲ್ಲಿ ಕಳೆದ ತಡರಾತ್ರಿ ಕಳವಿಗೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.

ಕಳ್ಳರು ಬ್ಯಾಂಕ್ ನ ಶಟರ್ ಅನ್ನು ಗ್ಯಾಸ್ ಕಟ್ಟರ್ ನಿಂದ ತುಂಡರಿಸಿ ಒಳನುಗ್ಗಲು ಪ್ರಯತ್ನ ನಡೆಸಿದರೂ ಅದು ವಿಫಲವಾಗಿದೆ. ಶಟರ್ ತೆರೆಯಲು ವಿಫಲರಾದ ಹಿನ್ನೆಲೆಯಲ್ಲಿ ಕಳ್ಳರಿಗೆ ಬ್ಯಾಂಕ್ ನ ಒಳನುಗ್ಗಲು ಅಸಾಧ್ಯವಾಗಿದೆ.

ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..