1. Home
  2. Bantwal
  3. ವಿಟ್ಲ : Instagram ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಪರಿಚಯ – ಪ್ರೀತಿ ನೆಪದಲ್ಲಿ ಮನೆಗೇ ಬಂದು ದೈಹಿಕ ಸಂಪರ್ಕ, ಆರೋಪಿಯ ಬಂಧನ

ವಿಟ್ಲ : Instagram ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಪರಿಚಯ – ಪ್ರೀತಿ ನೆಪದಲ್ಲಿ ಮನೆಗೇ ಬಂದು ದೈಹಿಕ ಸಂಪರ್ಕ, ಆರೋಪಿಯ ಬಂಧನ

ವಿಟ್ಲ : Instagram ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಪರಿಚಯ – ಪ್ರೀತಿ ನೆಪದಲ್ಲಿ ಮನೆಗೇ ಬಂದು ದೈಹಿಕ ಸಂಪರ್ಕ, ಆರೋಪಿಯ ಬಂಧನ
0

ನ್ಯೂಸ್ ಆ್ಯರೋ : ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಯುವಕನೊಬ್ಬನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕೊಳ್ನಾಡು ಗ್ರಾಮದ ಕುಳಾಲು ನಿವಾಸಿ ಸಂಶೀರ್ ಬಂಧಿತ ಆರೋಪಿಯಾಗಿದ್ದಾರೆ. ಆರೋಪಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಆಕೆಯ ಮನೆಗೆ ತೆರಳಿ ಬಲಾತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೋಲಿಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಹೆಚ್.ಈ. ನಾಗರಾಜ್ ನೇತೃತ್ವದಲ್ಲಿ ಎಸ್. ಐ. ಸಂದೀಪ್ ಶೆಟ್ಟಿ ಯವರ ತಂಡ ಕಾರ್ಯಾಚರಣೆ ನಡೆಸಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..