ನ್ಯೂಸ್ ಆ್ಯರೋ : ಗುಡ್ಡಪ್ರದೇಶದ ಹೊಂಡದಲ್ಲಿ ವ್ಯಕ್ತಿಯೋರ್ವರ ಅಸ್ತಿಪಂಜರ ಹಾಗೂ ಮೊಬೈಲ್ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ನಡೆದಿದೆ.
ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಒಂದು ಮೊಬೈಲ್ ಫೋನ್ ಹಾಗೂ ಬ್ಯಾಗ್ ಸಿಕ್ಕಿದ್ದು, ಅದನ್ನು ಗಮನಿಸಿ ಅಕ್ಕಪಕ್ಕದ ನೋಡಿದಾಗ ಮೊಬೈಲ್ ನ ಪಕ್ಕದಲ್ಲಿ ವ್ಯಕ್ತಿಯೊಬ್ಬರ ಅಸ್ತಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ.
ಕೆರೆ ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಸ್ತಿಪಂಜರ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಕೂಡಲೇ ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿರುವ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ವ್ಯಕ್ತಿ ಕೆಲದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕೆ ವ್ಯಕ್ತವಾಗಿದ್ದು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..