ನ್ಯೂಸ್ ಆ್ಯರೋ : ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸು ನಿಲ್ದಾಣದಲ್ಲಿ ಇಂದು ಮುಂಜಾನೆ ಬೆಳಗ್ಗೆ ನಡೆದಿದ್ದು, ಇಬ್ಬರೂ ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಎರಡು ಖಾಸಗಿ ಬಸ್ ಚಾಲಕರ ನಡುವೆ ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಟ ನಡೆದಿತ್ತು. ಇಂದೂ ಬೆಳಗ್ಗೆ ಮಹೇಶ್ ಮತ್ತು ಮಣಿಕಂಠ ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದಾರೆ.
ಘಟನೆಯಿಂದ ಬಸ್ ನಿಲ್ದಾಣದಲ್ಲಿ ಅಲ್ಪ ಹೊತ್ತು ಪ್ರಕ್ಷುಬ್ದ ವಾತಾವರಣ ನಿರ್ಮಾಣಗೊಂಡಿತ್ತು. ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ಪೊಲೀಸರು ಇಬ್ಬರು ಚಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿನಿತ್ಯ ಖಾಸಗಿ ಬಸ್ ಚಾಲಕರ ಹೊಡೆದಾಟ, ಬಡಿದಾಟ ಸಹಿತ ಉಪಟಳ ನಡೆಯುತ್ತಿರುವುದು ನಾಗರೀಕರಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಗರೀಕರು ಆಗ್ರಹಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..