1. Home
  2. Bantwal
  3. ವಿಟ್ಲ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ, ಪೋಲಿಸರ ಭೇಟಿ

ವಿಟ್ಲ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ, ಪೋಲಿಸರ ಭೇಟಿ

ವಿಟ್ಲ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ, ಪೋಲಿಸರ ಭೇಟಿ
0

ನ್ಯೂಸ್ ಆ್ಯರೋ‌ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ವಿಟ್ಲ ಸಮೀಪ ನಡೆದಿದೆ.

ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36 ವ.) ಮೃತಪಟ್ಟವರಾಗಿದ್ದಾರೆ.

ದಿವಾಕರ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ನ.೨ರಂದು ಬೆಳಿಗ್ಗೆ ಅವರ ಶವ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ನಾಗರಾಜ್ ಎಚ್,ಈ., ಎಸ್.ಐ.ಸಂದೀಪ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..