ನ್ಯೂಸ್ ಆ್ಯರೋ : ತಾಯಿ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟು ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಮಡಿಪುವಿನಲ್ಲಿ ಪತ್ತೆಯಾಗಿದ್ದಾರೆ.
ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ(29 ) ಪತ್ತೆಯಾದವರು.
ಕೆಲಸಕ್ಕೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಕುರಿತು ಆಕೆಯ ಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ವಿಟ್ಲದ ಸ್ವೀಟ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕವಿತಾರವರು ಅ.29ರಂದು ಕೆಲಸ ಮುಗಿಸಿ ತನ್ನ ತಾಯಿಮನೆಗೆ ತೆರಳುವುದಾಗಿ ಗಂಡನಲ್ಲಿ ತಿಳಿಸಿ ತೆರಳಿದ್ದರು.
ರಾತ್ರಿಯಾದರೂ ಕವಿತಾರವರು ತಾಯಿ ಮನೆಗೆ ತಲುಪದ ಹಿನ್ನೆಲೆಯಲ್ಲಿ ಅವರ ಸಹೋದರ ಗಿರೀಶ್ ರವರು ನಾಗೇಶ್ ರವರಿಗೆ ಕರೆ ಮಾಡಿ ಸಹೋದರಿ ಬಂದಿಲ್ಲ ಎಂದು ತಿಳಿಸಿದ್ದರು.
ಕೂಡಲೇ ನಾಗೇಶ್ ರವರು ಮನೆಗೆ ತೆರಳುವ ದಾರಿಯ ಸಹಿತ ಸಂಬಂಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರು ಕವಿತಾ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಪತ್ನಿಯನ್ನು ಹುಡುಕಿ ಕೊಡುವಂತೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ವಿಟ್ಲ ಠಾಣಾ ಪೊಲೀಸರು ಈ ಭಾವಚಿತ್ರದಲ್ಲಿ ಕಾಣುವ ಮಹಿಳೆಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದರು.
ಕೊನೆಗೂ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಪತ್ತೆಯಾಗಿದ್ದ ಮಹಿಳೆಯನ್ನು ಮುಡಿಪುವಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಟ್ಲದ ಮಹಿಳೆ ಮುಡಿಪುವಿಗೆ ಹೋಗಿದ್ದೇಕೆ? ಎಲ್ಲಿದ್ದರು ಎಂಬ ಬಗ್ಗೆ ಪೋಲಿಸರ ತನಿಖೆಯಿಂದ ಬಯಲಾಗಬೇಕಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..