ನ್ಯೂಸ್ ಆ್ಯರೋ : ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ.
ಕನ್ಯಾನ ನಿವಾಸಿ ಯೋಗಿಶ್ (34 ವ.) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಯೋಗೀಶ್ ರವರು ಕನ್ಯಾನದ ವೈನ್ ಶಾಪ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಅ.೨೨ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..