1. Home
  2. Belthangady
  3. ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ – ಓರ್ವ ಸಾವು, ಓರ್ವನಿಗೆ ಗಂಭೀರ ಗಾಯ

ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ – ಓರ್ವ ಸಾವು, ಓರ್ವನಿಗೆ ಗಂಭೀರ ಗಾಯ

ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ –  ಓರ್ವ ಸಾವು, ಓರ್ವನಿಗೆ ಗಂಭೀರ ಗಾಯ
0

ನ್ಯೂಸ್ ಆ್ಯರೋ‌ : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ.ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..