1. Home
  2. Belthangady
  3. ಬೆಳ್ತಂಗಡಿ : ಕೆರೆಗೆ ಹಾರಿ ಅಟೋ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ರಾತ್ರಿ 3 ಗಂಟೆಗೆ ಪ್ರವೀಣ್ ಮನೆ ಬಳಿ ಬಂದ ಕಾರ್ ಯಾರದ್ದು? ಮೆಹಂದಿ ಮನೆಯಲ್ಲಿ ಜಗಳ ನಡೆದಿದ್ದು ಯಾಕೆ…!?

ಬೆಳ್ತಂಗಡಿ : ಕೆರೆಗೆ ಹಾರಿ ಅಟೋ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ರಾತ್ರಿ 3 ಗಂಟೆಗೆ ಪ್ರವೀಣ್ ಮನೆ ಬಳಿ ಬಂದ ಕಾರ್ ಯಾರದ್ದು? ಮೆಹಂದಿ ಮನೆಯಲ್ಲಿ ಜಗಳ ನಡೆದಿದ್ದು ಯಾಕೆ…!?

ಬೆಳ್ತಂಗಡಿ : ಕೆರೆಗೆ ಹಾರಿ ಅಟೋ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ರಾತ್ರಿ 3 ಗಂಟೆಗೆ ಪ್ರವೀಣ್ ಮನೆ ಬಳಿ ಬಂದ ಕಾರ್ ಯಾರದ್ದು? ಮೆಹಂದಿ ಮನೆಯಲ್ಲಿ ಜಗಳ ನಡೆದಿದ್ದು ಯಾಕೆ…!?
0

ನ್ಯೂಸ್ ‌ಆ್ಯರೋ‌ : ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಕೆರೆಯಲ್ಲಿ ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ?
ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದರು.

ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1.39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು, ಆದರೆ ಮನೆಗೆ ಹಿಂತಿರುಗಿರಲಿಲ್ಲ. ಬಳಿಕ ಬುಧವಾರ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿರುವುದಾಗಿಯೂ ರಾತ್ರಿ 3 ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿರುವುದಾಗಿಯೂ, ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ ಎಂದೂ ಅವರು ದೂರಿದ್ದಾರೆ.

ಇದರಿಂದಾಗಿ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ತನಿಖೆ ಆರಂಭ;
ಈ ದೂರಿನ ಆಧಾರದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣ ಎಂಬ ಮಾಹಿತಿಗಳು ಹೊರ ಬಂದಿತ್ತು. ಸ್ನೇಹಿತರಿಗೆ ಕರೆ ಮಾಡಿ ಹೇಳಿದ್ದ ಎಂದೂ ಹೇಳಲಾಗಿತ್ತು. ಆದರೆ ಇದೀಗ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಲಾರಂಭಿಸಿದೆ.

ಮೆಹಂದಿ ಮನೆಯಲ್ಲಿ ಏನು ಸಂಭವಿಸಿದೆ ಎಂಬ ವಿಚಾರದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರವೀಣ್ ಮೇಲೆ ಹಲ್ಲೆ ನಡೆಸಿದವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬೆಳಗ್ಗಿನ ಜಾವ ಪ್ರವೀಣ್ ರವರ ಮನೆ ಸಮೀಪ ಬಂದ ಕಾರು ಯಾರದು? ಯಾಕಾಗಿ ಬಂದಿದ್ದಾರೆ ಎಂಬುದು ಮತ್ತೊಂದು ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಪೊಲೀಸರು ಈ ಎಲ್ಲಾ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಇದೀಗ ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿಗಳು ಲಭಿಸುವ ನಿರೀಕ್ಷೆಯಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..