ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ಟ ಗ್ರಾಮದಲ್ಲಿ ಆಟೊ ರಿಕ್ಷಾ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ್ದು, ನಾರಾವಿ ಗ್ರಾಮದ ಹಂಬಡ ನಿವಾಸಿ ನಿತ್ಯಾನಂದ ಪೂಜಾರಿ (48) ಅವರು ದುರ್ಮರಣಕ್ಕೀಡಾಗಿದ್ದಾರೆ.
ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು, ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಆಟೊ ರಿಕ್ಷಾ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಳ್ತಂಗಡಿಯ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತರಿಗೆ ತಾಯಿ, ಪತ್ನಿ ನಾರಾವಿ ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಕಾ, ಪುತ್ರ ಮತ್ತು ಪುತ್ರಿ ಇದ್ದು, ಇಡೀ ಮನೆ ಮಂದಿ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..