ನ್ಯೂಸ್ ಆ್ಯರೋ : ವಿಷ ಪೂರಿತ ಅಣಬೆಯ ಪದಾರ್ಥವನ್ನು ಸೇವಿಸಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಮೃತರನ್ನು ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಎಂದು ಗುರುತಿಸಲಾಗಿದೆ. ಇವರದ್ದು ತೀರಾ ಬಡಕುಟುಂಬವಾಗಿದ್ದು ಗುರುವ ತಮ್ಮ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.
ಇಂದು ಬೆಳಿಗ್ಗೆ ಗುರುವ ಹಾಗೂ ಒಬ್ಬ ಮಗನ ಮೃತದೇಹ ಮನೆ ಅಂಗಳದಲ್ಲಿ ಬಿದ್ದಿರುವುದನ್ನು ಸ್ಥಳೀಯರು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಪರಿಶೀಲನೆ ನಡೆಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನೊಬ್ಬ ಮಗ ಮನೆಯಲ್ಲಿ ಇಲ್ಲದಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..