1. Home
  2. Belthangady
  3. ಬೆಳ್ತಂಗಡಿ : ಐದು ವರ್ಷಗಳ ಹಿಂದಿನ ಕೊಲೆ ಪ್ರಕರಣದ ತೀರ್ಪು ಪ್ರಕಟ – ಕಬ್ಬಿಣದ ಲಿವರ್ ನಿಂದ ಬಡಿದು ಕೊಲೆಗೈದಾತನಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ : ಐದು ವರ್ಷಗಳ ಹಿಂದಿನ ಕೊಲೆ ಪ್ರಕರಣದ ತೀರ್ಪು ಪ್ರಕಟ – ಕಬ್ಬಿಣದ ಲಿವರ್ ನಿಂದ ಬಡಿದು ಕೊಲೆಗೈದಾತನಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ : ಐದು ವರ್ಷಗಳ ಹಿಂದಿನ ಕೊಲೆ ಪ್ರಕರಣದ ತೀರ್ಪು ಪ್ರಕಟ – ಕಬ್ಬಿಣದ ಲಿವರ್ ನಿಂದ ಬಡಿದು ಕೊಲೆಗೈದಾತನಿಗೆ ಜೀವಾವಧಿ ಶಿಕ್ಷೆ
0

ನ್ಯೂಸ್ ಆ್ಯರೋ‌ : 2017 ರಲ್ಲಿ ಬೆಳ್ತಂಗಡಿ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿ ಪೂರ್ವ ದ್ವೇಷದಿಂದ ಪ್ರದೀಪ್ ಎಂಬವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ದಿನೇಶ್ ನ್ಯಾಯತರ್ಪು ಎಂಬಾತ ಅಪರಾಧಿ ಎಂದು ಕೋರ್ಟ್ ತೀರ್ಪು ಹೊರಬಿದ್ದಿದೆ.

ಈ ಪ್ರಕರಣದ ಬಗ್ಗೆ ಮಂಗಳೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಾಕ್ಷ್ಯಾಧಾರಗಳ ಪ್ರಕಾರ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 10,000 ರೂಪಾಯಿ ದಂಡವನ್ನು ವಿಧಿಸಿದೆ.

2017 ರ ನವಂಬರ್ 24 ರಂದು ಆರೋಪಿ ದಿನೇಶ ಎಂಬಾತನು ಕಳಿಯ ಗ್ರಾಮದ ರೇಷ್ಮೆ ರೋಡ್ ಬಳಿ ಮಧ್ಯಾಹ್ನ 1.30 ರ ಸಮಯದಲ್ಲಿ ಪ್ರದೀಪ ಎಂಬಾತನನ್ನು ಕಂಡು ಪೂರ್ವದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಪ್ರದೀಪನನ್ನು ಕೈ ಸನ್ನೆ ಮಾಡಿ ಟಿಪ್ಪರ್ ಲಾರಿ ಬಳಿ ಕರೆದು ಅವಾಚ್ಯ ಶಬ್ದಗಳಿಂದ ಬೈದು ಕಬ್ಬಿಣದ ಲಿವರ್ ನಿಂದ ಪ್ರದೀಪನ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ್ದ.

ಈ ಘಟನೆಗೆ ಸಂಬಂಧಿಸಿದಂತೆ ಅಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಅಂದಿನ ತನಿಖಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..