1. Home
  2. Belthangady
  3. ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ 10 ಕೋಟಿ ಅನುದಾನ : ಶಾಸಕ ಹರೀಶ್ ಪೂಂಜಾ – 12 ದೇಗುಲಗಳಿಗೆ ತಲಾ 50 ಲಕ್ಷ, 16 ದೇಗುಲಗಳಿಗೆ ತಲಾ 25 ಲಕ್ಷ ಅನುದಾನ

ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ 10 ಕೋಟಿ ಅನುದಾನ : ಶಾಸಕ ಹರೀಶ್ ಪೂಂಜಾ – 12 ದೇಗುಲಗಳಿಗೆ ತಲಾ 50 ಲಕ್ಷ, 16 ದೇಗುಲಗಳಿಗೆ ತಲಾ 25 ಲಕ್ಷ ಅನುದಾನ

ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ 10 ಕೋಟಿ ಅನುದಾನ : ಶಾಸಕ ಹರೀಶ್ ಪೂಂಜಾ – 12 ದೇಗುಲಗಳಿಗೆ ತಲಾ 50 ಲಕ್ಷ, 16 ದೇಗುಲಗಳಿಗೆ ತಲಾ 25 ಲಕ್ಷ ಅನುದಾನ
0

ನ್ಯೂಸ್ ಆ್ಯರೋ‌ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಎಂದೇ ಬಿಂಬಿತವಾಗಿರುವ ಶಾಸಕ ಹರೀಶ್ ಪೂಂಜಾ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 28 ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ 10.00 ಕೋಟಿ ರೂಪಾಯಿಗಳ ಅನುದಾನದ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಈ ಮಟ್ಟದ ಅಪಾರ ಪ್ರಮಾಣದಲ್ಲಿ ಅನುದಾನವನ್ನು ಮಂಜೂರಾತಿಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ, ಧಾರ್ಮಿಕ ದತ್ತಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆಯವರಿಗೆ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್‍ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್‌ ರವರಿಗೆ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಇರುವ 28 ದೇವಾಲಯಗಳಿಗೆ ಸರಕಾರದ ಈ ಯೋಜನೆಯಿಂದ ಮೂಲಭೂತ ಸೌಕರ್ಯ ವೃದ್ಧಿಸಲು ನೆರವಾಗಲಿದೆ ಎನ್ನಲಾಗಿದ್ದು, ನಾರಾವಿಯ ಶ್ರೀ ಸೂರ್ಯ ನಾರಾಯಣ ದೇವಸ್ಥಾನ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ, ಕೊರಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು, ಶ್ರೀ ಗೋಪಾಕೃಷ್ಣ ದೇವಸ್ಥಾನ ನಾವೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಕಲ್ಮಂಜ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಹೊಸಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಹತ್ಯಡ್ಕ ಇದರ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.50.00 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಹಾಗೆಯೇ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ, ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು, ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟು, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬಂದಾರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯ, ಶ್ರೀ ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ, ಶ್ರೀ ಮಹಾಗಣಪತಿ ದೇವಸ್ಥಾನ ಬಡಗಕಾರಂದೂರು, ಪೆರ್ಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಜಿರೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೊಯ್ಯೂರು, ಸನ್ಯಾಸಿಕಟ್ಟೆ ಶ್ರೀ ಪರುಶುರಾಮ ದೇವಸ್ಥಾನ ಮುಂಡಾಜೆ, ಕುರಾಯ ಶ್ರೀ ಸದಾಶಿವೇಶ್ವರ ದೇವಸ್ಥಾನ ಬಂದಾರು, ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬಂದಾರು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳದಪೇಟೆ ಕಾಶಿಪಟ್ನ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮರೋಡಿ, ಶ್ರೀ ಸದಾಶಿವ ದೇವಸ್ಥಾನ ಕಳೆಂಜ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಮೂಡುಕೋಡಿ ಇವುಗಳ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.25.00 ಲಕ್ಷ ಅನುದಾನ ಮಂಜೂರಾತಿಗೊಂಡಿದೆ ಎಂದು ಶಾಸಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..