1. Home
  2. Belthangady
  3. ಬೆಳ್ತಂಗಡಿ ‌: ನಡ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ‌ – ಸ್ಥಳಕ್ಕೆ ಪೋಲಿಸರ ದೌಡು, ಪರಿಶೀಲನೆ

ಬೆಳ್ತಂಗಡಿ ‌: ನಡ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ‌ – ಸ್ಥಳಕ್ಕೆ ಪೋಲಿಸರ ದೌಡು, ಪರಿಶೀಲನೆ

ಬೆಳ್ತಂಗಡಿ ‌: ನಡ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ‌ – ಸ್ಥಳಕ್ಕೆ ಪೋಲಿಸರ ದೌಡು, ಪರಿಶೀಲನೆ
0

ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯತು ವ್ಯಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ.

ಕಟ್ಟಿಗೆ ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು ವಾಸನೆ ಬಂದಾಗ ಹತ್ತಿರದ ಮನೆಯವರು ಬಂದು ನೋಡಿದಾಗ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ‌ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..