ನ್ಯೂಸ್ ಆ್ಯರೋ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾಗಿರುವ ಮಹಮ್ಮದ್ ಅಶ್ರಫ್(35)ಹಾಗೂ ಅಬ್ದುಲ್ ಲತೀಫ್ (36) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಸುಮಾರು ಮೂವತ್ತು ಸಾವಿರ ಮೌಲ್ಯದ 805 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ್ದ ರಿಕ್ಷಾವನ್ನೂ ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ತಂಡ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗೂಡ್ಸ್ ಆಟೋ ರಕ್ಷವನ್ನು ತಡೆದು ತಪಾಸಣೆ ನಡೆಸಿದಾಗ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..