ಬೆಳ್ತಂಗಡಿ : ಸಮರ್ಥ ನಾಯಕನಿಲ್ಲದೆ ಕಂಗೆಟ್ಟ ಕಾಂಗ್ರೆಸಿಗರು – ಹಲವು ಮಂದಿ ಒಂದೇ ದಿನ ಬಿಜೆಪಿಗೆ ಸೇರ್ಪಡೆ

ನ್ಯೂಸ್ ಆ್ಯರೋ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳ ಸಭೆ ಎಸ್‌ಡಿಎಂ ಕಲಾಭವನ ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದಿದ್ದು, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೇರೆ ಬೇರೆ ಪಕ್ಷಗಳಿಂದ ಹಲವು ನಾಯಕರುಗಳು ಬಿಜೆಪಿಗೆ ಸೇರ್ಪಡೆಗೊಂಡರು. ಸೇರ್ಪಡೆಗೊಂಡ ಹಲವರಲ್ಲಿ ಹೆಚ್ಚಿನವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡವರಾಗಿದ್ದು, ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ಗೆ ಇದು ನಿಜಕ್ಕೂ ಶಾಕಿಂಗ್ ಸುದ್ದಿಯಾಗಿದೆ.

ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್ ಮುಖಂಡರಾಗಿದ್ದ ಚಂದನ್ ಪ್ರಸಾದ್ ಕಾಮತ್, ಲಾಯಿಲ ಗ್ರಾ.ಪಂ ಮಾಜಿ ಅಧ್ಯಕ್ಷ, ತಾ.ಪಂ ಮಾಜಿ ಸದಸ್ಯ ಸುಧಾಕರ ಬಿ.ಎಲ್, ಮುಂಡಾಜೆ ಗ್ರಾ.ಪಂ ಮಾಜಿ ಸದಸ್ಯೆ ಅಶ್ವಿನಿ ಹೆಬ್ಬಾರ್, ವೇಣೂರಿನ ಸತೀಶ್ ಮಡಿವಾಳ ಬಿಜೆಪಿ ಸೇರಿದರು.
ಅಲ್ಲದೇ ಧರ್ಮಸ್ಥಳ ಗ್ರಾ.ಪಂ ಸದಸ್ಯೆ ಗಾಯತ್ರಿ, ಕುಕ್ಕಳದ ರಾಜೇಶ್ವರಿ, ಮಾಲಾಡಿ ಗ್ರಾ.ಪಂ ಸದಸ್ಯ ಪುನೀತ್ ಕುಮಾರ್, ಸಹಕಾರಿ ಧುರೀಣ ಪುಷ್ಪರಾಜ ಜೈನ್, ನಂದ ಭಟ್, ಸತೀಶ್ ರಾವ್ ನಿಡ್ಲೆ, ಮಹೇಶ್ ಜೈನ್ ಧರ್ಮಸ್ಥಳ, ಧರ್ಮಸ್ಥಳ ಗ್ರಾ.ಪಂ ಮಾಜಿ ಸದಸ್ಯ ಆಂಟೊನಿ ಕಲ್ಲೇರಿ, ಸೆಬಾಸ್ಟಿಯನ್, ಆರಂಬೋಡಿ ಗ್ರಾ.ಪಂ ಮಾಜಿ ಸದಸ್ಯ ಆನಂದ ಶೆಟ್ಟಿ, ಕಾಶಿಬೆಟ್ಟು ಶನೈಶ್ಚರ ದೇವಸ್ಥಾನದ ಮೊಕ್ತೇಸರ ಜನಾರ್ದನ ಆಚಾರ್ಯ, ಕುಕ್ಕಳದ ವಿಠಲ, ಮೊಗ್ರು ಗ್ರಾಮದ ಕೇಶವ, ಕಲ್ಮಂಜ ಗುತ್ತು ಮನೆಯ ಸುಂದರಿ ಮೊದಲಾದ ನಾಯಕರು ಬಿಜೆಪಿ ಸೇರಿದ್ದು, ಚಂದನ್ ಪ್ರಸಾದ್ ಕಾಮತ್ ಅವರ ಹಲವಾರು ಮಂದಿ ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆಗೊಂಡರು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಮುಖಂಡರುಗಳನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಶಾಸಕ ಹರೀಶ್ ಪೂಂಜ ಹಾಗೂ ಬೆಳ್ತಂಗಡಿ ತಾಲೂಕಿನ ಬಿಜೆಪಿಯ ವಿವಿಧ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.