1. Home
  2. Belthangady
  3. ಧರ್ಮಸ್ಥಳ : ಅಪ್ರಾಪ್ತ ಮಾನಸಿಕ ಖಿನ್ನತೆಯ ಬಾಲಕಿಯ ಮೇಲೆ ಅತ್ಯಾಚಾರ‌ – ಪ್ರಕರಣ ದಾಖಲು, ಆರೋಪಿ ಪರಾರಿ

ಧರ್ಮಸ್ಥಳ : ಅಪ್ರಾಪ್ತ ಮಾನಸಿಕ ಖಿನ್ನತೆಯ ಬಾಲಕಿಯ ಮೇಲೆ ಅತ್ಯಾಚಾರ‌ – ಪ್ರಕರಣ ದಾಖಲು, ಆರೋಪಿ ಪರಾರಿ

ಧರ್ಮಸ್ಥಳ : ಅಪ್ರಾಪ್ತ ಮಾನಸಿಕ ಖಿನ್ನತೆಯ ಬಾಲಕಿಯ ಮೇಲೆ ಅತ್ಯಾಚಾರ‌ – ಪ್ರಕರಣ ದಾಖಲು, ಆರೋಪಿ ಪರಾರಿ
0

ನ್ಯೂಸ್ ಆ್ಯರೋ‌ : ಅಪ್ರಾಪ್ತ ವಯಸ್ಸಿನ ಮಾನಸಿಕ ಖಿನ್ನತೆ ಹೊಂದಿರುವ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಸಂಭವಿಸಿದ್ದು ಯುವಕನ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ದಯಾನಂದ ಎಂಬಾತ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಾಲಕಿಯನ್ನು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಸಿಕೊಂಡ ಯುವಕ ಆಕೆಯ ಮೊಬೈಲ್ ನಂಬರ್ ಅನ್ನು ಪಡೆದುಕೊಂಡು ಆಕೆಯೊಂದಿಗೆ ಸಂಪರ್ಕ ಬೆಳೆಸಿ ಆಕೆಯನ್ನು ಕಳೆಂಜ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಯುವಕ ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ ಇದನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದರಿಂದ ಮನ ನೊಂದ ಬಾಲಕಿ ಮನೆಯ ಸಮೀಪವಿರುವ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮನೆಯವರು ಕೂಡಲೇ ಆಕೆಯನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ. ಅತ್ಯಾಚಾರವೆಸಗಿರುವ ವಿಚಾರ ಆಗ ಬಹಿರಂಗಗೊಂಡಿದ್ದು ಇದೀಗ ಬಾಲಕಿ ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರಗ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..