1. Home
  2. Belthangady
  3. ಬೆಳ್ತಂಗಡಿ : ಎರ್ಮಾಯಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ದುರ್ಮರಣ – ಶನಿವಾರದ ಅರ್ಧ ರಜೆ ವಿದ್ಯಾರ್ಥಿಯ ಪ್ರಾಣ ಕಸಿಯಿತು…!!

ಬೆಳ್ತಂಗಡಿ : ಎರ್ಮಾಯಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ದುರ್ಮರಣ – ಶನಿವಾರದ ಅರ್ಧ ರಜೆ ವಿದ್ಯಾರ್ಥಿಯ ಪ್ರಾಣ ಕಸಿಯಿತು…!!

ಬೆಳ್ತಂಗಡಿ : ಎರ್ಮಾಯಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ದುರ್ಮರಣ – ಶನಿವಾರದ ಅರ್ಧ ರಜೆ ವಿದ್ಯಾರ್ಥಿಯ ಪ್ರಾಣ ಕಸಿಯಿತು…!!
0

ನ್ಯೂಸ್ ಆ್ಯರೋ : ‌ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನಕ್ಕೆ ಇಳಿದಿದ್ದ ‌ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17) ಈ ದುರ್ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾರೆ.

ಶನಿವಾರ ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಆರೇಳು ಮಂದಿ ಸ್ನೇಹಿತರ ಜತೆ ಎರ್ಮಾಯಿ ಫಾಲ್ಸ್ ಗೆ‌ ಹೋಗಿ, ತೊಟ್ಲಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕಲ್ಲಂಡ ಪರಿಸರದ ತೊಟ್ಲಾಯಿ ಗುಂಡಿಯಲ್ಲಿ ಫಾಲ್ಸ್ ಗೆ ಬರುವ ಮಂದಿ ಸ್ನಾನಕ್ಕೆ ಇಳಿಯುವುದು ಸಾಮಾನ್ಯ. ಅದೇ ರೀತಿಯಾಗಿ ಇವರೂ ಸ್ನಾನಕ್ಕೆ ಇಳಿದಿದ್ದು ಈತ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಆಳವಾದ ಹೊಂಡದಲ್ಲಿ ಸಿಲುಕಿದ್ದಾನೆ. ಅವರೊಂದಿಗಿದ್ದವರು ಬೊಬ್ಬೊ ಹೊಡದು ಸಹಾಯಕ್ಕಾಗಿ ಯಾಚಿಸಿದ್ದು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ನೀರಿಗೆ ಇಳಿದು ಆತನ್ನು ನೀರಿನಿಂದ ಮೇಲೆತ್ತಿದರು.

ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ತಂದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..