1. Home
  2. Belthangady
  3. ಧರ್ಮಸ್ಥಳ ‌: ತೋಟಕ್ಕೆ ಹೋಗಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು – ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ಧರ್ಮಸ್ಥಳ ‌: ತೋಟಕ್ಕೆ ಹೋಗಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು – ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ

ಧರ್ಮಸ್ಥಳ ‌: ತೋಟಕ್ಕೆ ಹೋಗಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು – ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ
0

ನ್ಯೂಸ್ ಆ್ಯರೋ : ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ.



ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲಿಲ್ಲ‌.



ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆ ವೇಳೆಗೆ ತೋಟದಲ್ಲಿ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.



ಘಟನೆಯ ಬಗ್ಗೆ ಮನೆಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್‌ ಡಿ. ಅನಿಲ್ ಕುಮಾರ್ ಅವರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದಯ ಅವರು ಯಾವ ರೀತಿಯಾಗಿ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..