ನ್ಯೂಸ್ ಆ್ಯರೋ : ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಒಳಬೈಲು ನಿವಾಸಿಯಾಗಿರುವ ಸಿಲ್ವಿಯಾ ಫರ್ನಾಂಡೀಸ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 25 ಗ್ರಾಂ ಚಿನ್ನವನ್ನು ಕಳವುಗೈದಿದ್ದಾರೆ.
ರಾತ್ರಿ ವೇಳೆ ಮನೆಯಲ್ಲಿ ಯಾರು ಇಲ್ಲದ ಬಗ್ಗೆ ಮಾಹಿತಿಯನ್ನು ಖಾತ್ರಿ ಪಡಿಸಿಕೊಂಡ ಕಳ್ಳರು ತಮ್ಮ ಕೈ ಚಳಕ ಮೆರೆದಿದ್ದಾರೆ.
ಮನೆಯ ಕಿಟಕಿಯನ್ನು ಮುರಿದು ಒಳ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 1.20 ಲಕ್ಷ ಮೌಲ್ಯದ ಎರಡು ಉಂಗುರ, ಎರಡು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ.
ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..