ನ್ಯೂಸ್ ಆ್ಯರೋ : ಬೆಳ್ತಂಗಡಿ ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಟ್ಯಾಕ್ಟರ್ ನಲ್ಲಿ ಕಬ್ಬಿಣದ ರಾಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.