1. Home
  2. Belthangady
  3. ಬೆಳ್ತಂಗಡಿ : ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ – ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸದಸ್ಯ ವಿಜೇತ್ ಆಯ್ಕೆ

ಬೆಳ್ತಂಗಡಿ : ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ – ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸದಸ್ಯ ವಿಜೇತ್ ಆಯ್ಕೆ

ಬೆಳ್ತಂಗಡಿ : ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ – ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸದಸ್ಯ ವಿಜೇತ್ ಆಯ್ಕೆ
0

ನ್ಯೂಸ್ ಆ್ಯರೋ : ಭಾರತೀಯ ಸೇನೆಗೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಶ್ರೀಮತಿ ವಿಶಾಲ ಮತ್ತು ವೀರೇಶ್ ಮಡಿವಾಳ ದಂಪತಿಗಳ ಪುತ್ರ ಶ್ರೀ ವಿಜೇತ್ ರವರು ಆಯ್ಕೆಯಾಗಿದ್ದಾರೆ.

ವಿಜೇತ್ ಅವರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಕುತ್ಲೂರು ಇದರ ಸಕ್ರಿಯ ಸದಸ್ಯನಾಗಿದ್ದು, ಸಾಮಾಜಿಕ ಚಟುವಟಿಕೆಗಳ ಕಾರ್ಯಕ್ಕೆ ಸ್ವಯಂ ಸೇವಕನಾಗಿ ತನ್ನನು ತಾನು ತೊಡಗಿಸಿಕೊಂಡಿದ್ದಾರೆ.

ವಿಜೇತ್ ರವರು ಪ್ರೌಢಶಾಲಾ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿ ಪೂರೈಸಿದ್ದಾರೆ. ಸದ್ಯ ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿದ್ದು, ಹಾವೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸೇನೆಗೆ ಆಯ್ಕೆಗೊಂಡಿರುತ್ತಾರೆ.

ವಿಜೇತ್ ಅಗ್ನಿವೀರ್ ಗೆ ಆಯ್ಕೆ ಆಗಿರುವುದಕ್ಕೆ ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕರು, ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಕುತ್ಲೂರು ಇದರ ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..