ನ್ಯೂಸ್ ಆ್ಯರೋ : ಟ್ವಿಟರ್ ನ ಮಾಲಕನಾದ ಬಳಿಕ ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಹಿನ್ನಡೆ ಅನುಭವಿಸಿದಂತೆ ತೋರುತ್ತಿದೆ. ಟ್ವಿಟರ್ ಖರೀದಿಗೂ ಮೊದಲು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಎಲಾನ್ ಮಸ್ಕ್ ಸದ್ಯ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದರ ನಡುವೆಯೇ ತಾನು ಟ್ವಿಟರ್ ನ ಸಿಇಒ ಸ್ಥಾನದಿಂದ ಕೆಳಗಿಳಿಯೋದಾಗಿ ಘೋಷಿಸಿದ್ದಾರೆ.
ಸಿಇಒ ಜಾಗಕ್ಕೆ ಸಮರ್ಥ ವ್ಯಕ್ತಿಯನ್ನು ಹುಡುಕಿದ ನಂತರ ಟ್ವಿಟರ್ ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ. ‘ಕೆಲಸವನ್ನು ತೆಗೆದುಕೊಳ್ಳಲು ಸಾಕಷ್ಟು ಮೂರ್ಖರು ಸಿಕ್ಕ ತಕ್ಷಣ ನಾನು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.
ಅದರ ನಂತರ, ನಾನು ಸಾಫ್ಟ್ವೇರ್ ಮತ್ತು ಸರ್ವರ್‌ಗಳ ತಂಡಗಳನ್ನು ನಡೆಸುತ್ತೇನೆ’ ಎಂದು ಇಂದು ಭಾರತೀಯ ಕಾಲಮಾನ 6.50ಕ್ಕೆ ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ.
I will resign as CEO as soon as I find someone foolish enough to take the job! After that, I will just run the software & servers teams.
ಭಾನುವಾರ ಸಂಜೆ ಟ್ವಿಟರ್ ಬಳಕೆದಾರರು ನಿರ್ಣಾಯಕವಾಗಿ ಮತ ಚಲಾಯಿಸಿದ ನಂತರ ಮಸ್ಕ್ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮ ಟ್ವಿಟರ್ ನ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದನ್ನು ಉಲ್ಲೇಖಿಸಿದ್ದಾರೆ
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..