1. Home
  2. Business
  3. News
  4. ಹಣಕಾಸು
  5. ಸುದ್ದಿ
  6. ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ – 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ…!!

ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ – 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ…!!

ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ – 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಘೋಷಣೆ…!!
0

ನ್ಯೂಸ್ ಆ್ಯರೋ : ಹೊಸದುರ್ಗ ದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ಡಿಸೆಂಬರ್‌ನಲ್ಲಿ 2 ಮಹತ್ವದ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ರೂಪಾಯಿ ಸಾಲ ಸೌಲಭ್ಯ ಮತ್ತು ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಇನ್ನು, ಇದರಿಂದ ರಾಜ್ಯದ ತಲಾ 5 ಲಕ್ಷ ಯುವಕರಿಗೆ ಮತ್ತು ಮಹಿಳೆಯರಿಗೆ ಉದ್ಯೋಗ ಲಭಿಸಲಿದೆ ಎಂದು ಕೂಡ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಪ್ರತಿ ಸ್ಥಳೀಯಾಡಳಿತ ಹಂತದಲ್ಲಿ 18 ರಿಂದ 29 ವರ್ಷ ವಯಸ್ಸಿನ, 10ರಿಂದ 20 ಯುವ ಜನರ ಒಂದು ಸ್ವ ಸಹಾಯ ಗುಂಪನ್ನು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಇಲಾಖೆ ವತಿಯಿಂದ ರಚಿಸಿ ಅವರಿಗೆ ಉದ್ಯಮಶೀಲತಾ ತರಬೇತಿ ನೀಡಿ ರಾಷ್ಟ್ರೀಕೃತ ಬ್ಯಾಂಕ್ ಮುಖಾಂತರ ಆರ್ಥಿಕ ಸಹಾಯ ನೀಡಲಾಗುವುದು.

ಈ ಮೂಲಕ ಯುವ ಜನತೆಗೆ ಸ್ವ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳ ಉತ್ತೇಜನ ಮತ್ತು ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಈ ಯೋಜನೆ ಬಹಳ‌ ಉಪಯುಕ್ತವಾಗಲಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..