ನ್ಯೂಸ್ ಆ್ಯರೋ : ಕಾಡಾನೆ ಸೆರೆ ಸಿಕ್ಕ ಬಳಿಕ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದು, ಇದೀಗ ಈ ಪ್ರಕರಣದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಾಡಾನೆಗಳ ಹಿಂಡನ್ನು ಸೆರೆಹಿಡಿಯುವಂತೆ ಒತ್ತಾಯ: ಸೆರೆಸಿಕ್ಕ ಆನೆಯನ್ನು ದುಬಾರೆ ಆನೆ ಬಿಡಾರಕ್ಕೆ ಕರೆದೊಯ್ಯಲು ಲಾರಿಗೆ ಹತ್ತಿಸುತ್ತಿದ್ದಾಗ ಸ್ಥಳದಲ್ಲಿದ್ದ ಕೆಲ ಜನರು ಉಳಿದ ಆನೆಗಳನ್ನು ಸೆರೆಹಿಡಿದು ಕರೆದೊಯ್ಯುವಂತೆ ಅಧಿಕಾರಿಗಳ ಜತೆ ವಾಗ್ವಾದಕ್ಕಿಳಿದಿದ್ದಾರೆ. […]