ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಇನ್ನೂ ಕೂಡ ಪತ್ತೆಯಾಗಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಗುಂಡಡ್ಕ ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಶೀಘ್ರ ಪತ್ತೆಗೆ ಮನವಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗ್ರಾ.ಪಂ ಸದಸ್ಯ ರಾಜೇಶ್ ಅವರು ಪೊಲೀಸರು ಈ ಘಟನೆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. […]