ನ್ಯೂಸ್ ಆ್ಯರೋ : ಜಗತ್ತನ್ನು ತಲ್ಲಣಗೊಳಿಸಿದ್ದ ಕೋವಿಡ್ 19 ಪ್ರಕರಣ ಮತ್ತೆ ಚೀನಾದಲ್ಲಿ ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಭಾರತದ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ, ಡಿಸೆಂಬರ್ 24ರಿಂದ ಅಂತರರಾಷ್ಟ್ರೀಯ ವಿಮಾನಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಚೀನಾದ ಹೊರತಾಗಿ ಕೊರೊನಾದ ಹೊಸ ರೂಪಾಂತರವು ಜಪಾನ್ ಮತ್ತು ಅಮೆರಿಕದಲ್ಲಿಯೂ ತನ್ನ ಪರಿಣಾಮವನ್ನು ತೋರಿಸುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಭಾರತೀಯ ವೈದ್ಯಕೀಯ ಸಂಘ ಸಲಹೆ ನೀಡಿದ್ದು, ಅದರಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪ್ರತಿ […]