ನ್ಯೂಸ್ ಆ್ಯರೋ: ಪ್ರತಿ ಕನ್ನಡಿಗ ಹೆಮ್ಮೆಯ ಹಬ್ಬ ಕರ್ನಾಟಕ ರಾಜ್ಯೋತ್ಸವ. ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಬಾರಿ ನಡೆಯುತ್ತಿರುವ 67ನೇ ವರ್ಷದ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಡೆದ ‘ಕನ್ನಡದ ಕೋಟಿ ಕಂಠ ಗಾಯನ’ ಕಾರ್ಯಕ್ರಮ ಕನ್ನಡದ ಕಂಪನ್ನು ಮತ್ತಷ್ಟು ಪಸರಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ರಾಜ್ಯ ಅಂದರೆ ಆಗಿನ ಮೈಸೂರನ್ನು 1956 ನವೆಂಬರ್ 1 ರಂದು ರಾಜ್ಯವನ್ನಾಗಿ ನಿರ್ಮಾಣ ಮಾಡಲಾಯಿತು. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು […]