ನ್ಯೂಸ್ ಆ್ಯರೋ : ರಬ್ಬರ್ ಟ್ಯಾಪಿಂಗ್ ಮುಗಿಸಿ ಬರುತ್ತಿದ್ದ ವೇಳೆ ಎಡವಿಬಿದ್ದ ಪರಿಣಾಮ ಟ್ಯಾಪಿಂಗ್ ಕತ್ತಿ ದೇಹವನ್ನು ಹೊಕ್ಕಿದ್ದರಿಂದ ಗಂಭೀರ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. […]