ನ್ಯೂಸ್ ಆ್ಯರೋ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 9 ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುರುಘಾ ಮಠದ ಉಸ್ತುವಾರಿ ಬಸವಪ್ರಭುಶ್ರೀ ದೂರು ನೀಡಿದ್ದರು. ಸ್ವಾಮೀಜಿ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಪಿತೂರಿ ನಡೆದಿದೆ ಎಂದು ಅವರು ದೂರು ನೀಡಿದ್ದರು. […]