ನ್ಯೂಸ್ ಆ್ಯರೋ : ಇದು SSLC ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ. ಈ 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್. ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ.
ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಪುನರಾವರ್ತಿ ಅಭ್ಯರ್ಥಿಗಳಿಗೆ ಈ ಕಛೇರಿ ಅಧಿಸೂಚನೆ ದಿನಾಂಕ 17:09:2022 ರ ಪುಟ ಸಂಖ್ಯೆ 29 ರಲ್ಲಿ ವಿವರಣೆ ನೀಡಿರುವಂತೆ ತಾಂತ್ರಿಕ ವಿಷಯ ಆಯ್ಕೆ ಮಾಡಿಕೊಳ್ಳತಕ್ಕದ್ದು ಎಂದು ಸೂಚನೆ ನೀಡಿದ್ದಾರೆ.
ಇನ್ನೂ 2022-23 ನೇ ಸಾಲಿನ 10 ನೇ ತರಗತಿಯಲ್ಲಿ ಜೆಟಿಎಸ್ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಇಲಾಖೆಯಲ್ಲಿ ಅಭಿವೃದ್ದಿಪಡಿಸಿರುವ ಪರಿಷ್ಕೃತ ಪಠ್ಯ ಕ್ರಮವನ್ನು ಆಧರಿಸಿ ಪರೀಕ್ಷೆ ನಡೆಸಲಾಗುತ್ತದೆ ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..