ನ್ಯೂಸ್ ಆ್ಯರೋ : ಹಿಂದಿ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ, ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಜಿಮ್ ವರ್ಕೌಟ್ ನ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಆನಂದ್ ಸೂರ್ಯವಂಶಿ ಎಂದೂ ಕರೆಯಲ್ಪಡುವ ಸಿದ್ದಾಂತ್ ವೀರ್ ಸೂರ್ಯವಂಶಿ ಕಿರುತೆರೆ ಜಗತ್ತಿನಲ್ಲಿ ಜನಪ್ರಿಯ ಮುಖವಾಗಿದ್ದರು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ‘ಕುಸುಮ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು
2017ರಲ್ಲಿ ಈತ ಎರಡನೇ ಮದುವೆಯಾಗಿದ್ದರು. ಸಿದ್ದಾಂತ್ ಅವರು ಪತ್ನಿ ಅಲೆಸಿಯಾ ರಾವುತ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
2022ರಲ್ಲಿ ‘ಜಿದ್ದಿ ದಿಲ್ ಮಾನೆ ನಾ’ ಧಾರಾವಾಹಿಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಕುಸುಮ್, ವಾರಿಸ್, ಸೂರ್ಯಪುತ್ರ ಕರ್ಣ್ ಸೇರಿದಂತೆ ಅನೇಕ ಜನಪ್ರಿಯ ಧಾರಾವಾಹಿಯಲ್ಲಿ ಸಿದ್ಧಾಂತ್ ಅಭಿನಯಿಸಿದ್ದರು.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..