ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ನಿಂದ ಬ್ಯಾನ್ ವಿಚಾರ – ಅಚ್ಚರಿ ಮೂಡಿಸಿದ ನಿರ್ದೇಶಕ ನಾಗಶೇಖರ್ ಹೇಳಿಕೆ : ಮೈನಾ ನಿರ್ದೇಶಕ ಹೇಳಿದ್ದೇನು?

ನ್ಯೂಸ್ ಆ್ಯರೋ : ನ್ಯಾಶನಲ್ ಕ್ರಶ್ ಅಂತಲೇ ರಾಷ್ಟ್ರಮಟ್ಟದಲ್ಲಿ ಫೇಮಸ್ ಆಗಿರೋ ನಟಿ ರಶ್ಮಿಕಾ ಮಂದಣ್ಣ. ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಈ ಬೆಡಗಿ ಆಮೇಲೆ ಸೌತ್ ಇಂಡಿಯನ್ ಇಂಡಸ್ಟ್ರಿಯಲ್ಲಿ ಮಿಂಚಿ ಇದೀಗ ಬಾಲಿವುಡ್‌ನಲ್ಲೂ ಬೇಡಿಕೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹುಡುಗಿ ಬಗ್ಗೆ ಆರಂಭದಿಂದಲೂ ಕನ್ನಡಿಗರಿಗೆ ಅಸಮಾಧಾನ ಇದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ.

ಸದ್ಯಕ್ಕೀಗ ಈ ನಟಿಯನ್ನು ಕನ್ನಡ ಇಂಡಸ್ಟ್ರಿಯಲ್ಲಿ ಬ್ಯಾನ್ ಮಾಡಲಾಗಿದೆ ಅನ್ನೋ ಮಾತುಗಳಿವೆ. ಆದರೆ ಒಬ್ಬ ನಟಿಯನ್ನು ಬ್ಯಾನ್ ಮಾಡೋದು ಎಷ್ಟು ಸರಿ? ಆಕೆಯನ್ನು ಬ್ಯಾನ್ ಮಾಡೋದಕ್ಕೆ ನಿರ್ದಿಷ್ಟವಾದ ಒಂದು ಕಾರಣ ಇದೆಯಾ ಅನ್ನೋ ವಾದಗಳೂ ಕೇಳಿ ಬರುತ್ತಿವೆ.
ಹೌದು.. ರಕ್ಷಿತ್ ಶೆಟ್ಟಿ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಅವಮಾನಿಸಿದ್ದ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ರಶ್ಮಿಕಾ ಮಂದಣ್ಣಗೆ ಟಾಂಗ್ ಕೊಟ್ಟಿದ್ದರು. ಸಂದರ್ಶನದಲ್ಲಿ ರಿಷಬ್ ಶೆಟ್ಟಿ ರಶ್ಮಿಕಾ ಹೆಸರು ಹೇಳದೆ ಕೈಯಲ್ಲೇ ಆಕ್ಷನ್ ಮಾಡಿ ಅಂಥ ನಟಿಯರ ಜೊತೆ ಕೆಲಸ ಮಾಡಲ್ಲ ಎಂದು ಹೇಳಿದ್ದರು.
ರಿಷಬ್ ಶೆಟ್ಟಿ ರಿಯಾಕ್ಷನ್ ಕೂಡ ವೈರಲ್ ಆಗಿದ್ದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ವಿವಾದದ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಬ್ಯಾನ್ ಎನ್ನುವ ಸುದ್ದಿ ಹರಿದಾಡುತ್ತಿದೆ. ಕನ್ನಡ ಸಿನಿಮಾರಂಗದಿಂದ ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಲಾಗುತ್ತಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಇಷ್ಟೆಲ್ಲಾ ಬೆಳವಣಿಗೆ ರಶ್ಮಿಕಾ ಪರ ʻಮೈನಾʼ ನಿರ್ದೇಶಕ ನಾಗಶೇಖರ್ ಬ್ಯಾಟ್ ಬೀಸಿದ್ದು, ರಶ್ಮಿಕಾ ಅವರನ್ನು ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಎಂಬ ಹೇಳಿಕೆಯನ್ನ ನೀಡಿದ್ದಾರೆ.
ರಶ್ಮಿಕಾ ಬ್ಯಾನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದ್ದು, ಸದಾ ಕಾಲ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೆ ಚಾಲ್ತಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಬ್ಯಾನ್ ಆಕ್ರೋಶದ ಬೆನ್ನಲ್ಲೇ ‘ಸಂಜು ವೆಡ್ಸ್ ಗೀತಾ’, ‘ಮೈನಾ’ ಖ್ಯಾತಿಯ ನಾಗಶೇಖರ್ ಈ ಕುರಿತು ರಿಯಾಕ್ಟ್ ಮಾಡಿದ್ದಾರೆ.
ನಾಗಶೇಖರ್, ತೆಲುಗಿನಲ್ಲಿ ‘ಗುರ್ತುಂದಾ ಶೀತಕಾಲಂ’ ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಕನ್ನಡದ ‘ಲವ್ ಮಾಕ್‌ಟೇಲ್’ ರೀಮೇಕ್ ಆಗಿದ್ದು ಡಿಸೆಂಬರ್ 9 ರಂದು ತೆರೆ ಕಾಣುತ್ತಿದೆ. ಚಿತ್ರವನ್ನು ಭಾವನಾ ರವಿ, ನಾಗಶೇಖರ್, ರಾಮಾರಾವ್ ಚಿಂತಪಲ್ಲಿ ಜೊತೆ ಸೇರಿ ನಿರ್ಮಿಸಿದ್ದಾರೆ. ಸತ್ಯದೇವ್, ತಮನ್ನಾ, ಮೇಘಾ ಆಕಾಶ್, ಕಾವ್ಯ ಶೆಟ್ಟಿ, ಸುಹಾಸಿನಿ ಮಣಿರತ್ನಂ ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಪ್ರಮೋಷನ್‌ಗಾಗಿ ತೆಲುಗು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ನಾಗಶೇಖರ್‌ಗೆ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾಗಿದೆ.

ಈ ವೇಳೆ ರಶ್ಮಿಕಾ ಬ್ಯಾನ್ ಮತ್ತು ಮೊದಲ ಚಿತ್ರದ ಅವಕಾಶದ ಬಗ್ಗೆ ನಿರ್ದೇಶಕ ನಾಗಶೇಖರ್ ಅವರಿಗೆ ಪ್ರಶ್ನೆ ಕೇಳಲಾಗಿದ್ದು, ಅವಕಾಶ ಕೊಟ್ಟವರನ್ನು ನೆನಪು ಇಟ್ಟುಕೊಳ್ಳಬೇಕು ಎಂದು ನಿರೀಕ್ಷೆ ಮಾಡುವುದೇ ತಪ್ಪು. ಅದನ್ನೆಲ್ಲಾ ನಿರೀಕ್ಷಿಸಬಾರದು ಎಂದಿದ್ದಾರೆ.
ಇನ್ನೂ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು ವೇಳೆ ರಶ್ಮಿಕಾ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದರೆ ಚಿತ್ರರಂಗಕ್ಕೆ ನಷ್ಟ ಎಂದಿದ್ದಾರೆ. ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ. ಉದಾಹರಣೆಗೆ ಮುಂದಿನ ದಿನಗಳಲ್ಲಿ ನನ್ನ ಕನ್ನಡದ ಸಿನಿಮಾಗೆ ರಶ್ಮಿಕಾ ರೀತಿಯ ನಟಿ ಬೇಕು ಎಂದುಕೊಳ್ಳುತ್ತೇವೆ. ನೀವು ಆಕೆಯನ್ನು ಬ್ಯಾನ್ ಮಾಡಿದರೆ, ಫಿಲ್ಮ್ ಮೇಕರ್ಸ್‌ಗೆ ತೊಂದರೆಯಾಗುತ್ತದೆ ಎಂದು ನಾಗಶೇಖರ್ ಮಾತನಾಡಿದ್ದಾರೆ.