ನ್ಯೂಸ್ ಆ್ಯರೋ: ನವೆಂಬರ್ 1ರಂದು‘ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ನೀಡಲಾಗುವ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನಟ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರುವುದು ಖಚಿತವಾಗಿದೆ. ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಆಯೋಜಕರು ಈ ಸಂಬಂಧ ಮಾಹಿತಿಯನ್ನು ಹಂಚಿಕೊಂಡಿದ್ದು, ತಮ್ಮ ಅಧಿಕೃತ ಲೆಟರ್ ಹೆಡ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ನಟ ರಜನಿಕಾಂತ್ ತಿಳಿಸಿದ್ದಾರೆ. ಅದಲ್ಲದೆ ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿರುವುದಾಗಿ ಹೇಳಿದ್ದಾರೆ.
ಪುನೀತ್‌ಗೆ ನೀಡುವ ಪ್ರಶಸ್ತಿಯು ಬೆಳ್ಳಿಯ ಸ್ಮರಣಿಕೆ, ಜೊತೆಗೆ, 50 ಗ್ರಾಂ ಚಿನ್ನದ ಪದಕ ಇರಲಿದೆ. ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಗಾಯಕ ವಿಜಯಪ್ರಕಾಶ್ ತಂಡದಿಂದ ಸಂಗೀತ ರಸಮಂಜರಿ ಇರಲಿದೆ. 5 ಸಾವಿರ ಜನರಿಗೆ ಪಾಸ್ ನೀಡಲಾಗಿದೆ.
ಈ ಹಿಂದೆ ಕುವೆಂಪು, ಡಾ. ರಾಜ್‌ಕುಮಾರ್, ಎಸ್. ನಿಜಲಿಂಗಪ್ಪ, ಪ್ರೊ. ಸಿ.ಎನ್.ಆರ್. ರಾವ್, ಪಂ. ಭೀಮಸೇನ ಜೋಶಿ, ಶಿವಕುಮಾರ ಸ್ವಾಮೀಜಿ, ದೇ. ಜವರೇಗೌಡ, ಡಿ. ವೀರೇಂದ್ರ ಹೆಗ್ಗಡೆ ಹೀಗೆ 8 ಸಾಧಕರಿಗೆ ವಿಧಾನ ಸೌಧದಲ್ಲಿಯೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..