1. Home
  2. Entertainment
  3. ಪ್ಯಾನ್ ಇಂಡಿಯಾ ಸಿನಿಮಾ ನೀಡಲು ಸಜ್ಜಾದ ತೆಲುಗು ಸ್ಟಾರ್ ನಾನಿ – ಹಳ್ಳಿ ಹುಡುಗಿ ಪಾತ್ರದಲ್ಲಿ ಕೀರ್ತಿ ಸುರೇಶ್ ಹಂಗಾಮ

ಪ್ಯಾನ್ ಇಂಡಿಯಾ ಸಿನಿಮಾ ನೀಡಲು ಸಜ್ಜಾದ ತೆಲುಗು ಸ್ಟಾರ್ ನಾನಿ – ಹಳ್ಳಿ ಹುಡುಗಿ ಪಾತ್ರದಲ್ಲಿ ಕೀರ್ತಿ ಸುರೇಶ್ ಹಂಗಾಮ

ಪ್ಯಾನ್ ಇಂಡಿಯಾ ಸಿನಿಮಾ ನೀಡಲು ಸಜ್ಜಾದ ತೆಲುಗು ಸ್ಟಾರ್ ನಾನಿ – ಹಳ್ಳಿ ಹುಡುಗಿ ಪಾತ್ರದಲ್ಲಿ  ಕೀರ್ತಿ ಸುರೇಶ್ ಹಂಗಾಮ
0

ನ್ಯೂಸ್ ಆ್ಯರೋ : ಕೆಲ ದಿನಗಳ ಹಿಂದೆಯಷ್ಟೇ ತೆಲುಗು ಚಿತ್ರರಂಗದ ವರ್ಸಟೈಲ್ ಆ್ಯಕ್ಟರ್, ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹುನಿರೀಕ್ಷಿತ ‘ದಸರಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ನಾನಿಯ ಖಡಕ್ ಲುಕ್ ಕಂಡು ಸಿನಿ ಪ್ರಿಯರು ದಂಗಾಗಿದ್ದರು.

ಇದೀಗ ಸಿನೆಮಾದ ನಾಯಕಿಯ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಮಹಾ ನಟಿಯ ಫೋಟೋ ವೈರಲ್ ಆಗುತ್ತಿದೆ.

ದಸರಾ ಸಿನಿಮಾದಲ್ಲಿ ಕೀರ್ತಿ ಸುರೇಶ್ ಹೇಗೆ ಕಾಣುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಬಿದ್ದಿದ್ದು, ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ.

ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿ ಪ್ರಿಯರು ಕೀರ್ತಿ ಸುರೇಶ್ ಲುಕ್ ಗೂ ಮಾರುಹೋಗಿದ್ದು, ಕೀರ್ತಿ ಈ ಚಿತ್ರದಲ್ಲಿ ‘ವೆನ್ನಲ’ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಫ್ಯಾನ್ಸ್ ಕ್ಲೀನ್ ಬೌಲ್ಡ್ ಆಗಿದ್ದು, ಈ ಹಿಂದೆ ಕೂಡ ಸಿನಿಮಾದ ‘ಧೂಮ್ ಧಾಮ್ ಧೋಸ್ತಾನ್’ ಹಾಡಿಗೆ ನಟಿ ಟಪ್ಪಾಂಗುಚ್ಚಿ ಸ್ಟೆಪ್ ಹಾಕಿರುವ ವಿಡಿಯೊ ವೈರಲ್ ಆಗಿತ್ತು.

ವಿಭಿನ್ನ ಪ್ರಕಾರದ ಸಿನಿಮಾಗಳಿಗೆ ಹೆಸರಾದ ನಾನಿ ಈ ಬಾರಿ ಫ್ರೆಶ್ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದು, ಈಗಾಗಲೇ ಸಿನಿ ಲೋಕದಲ್ಲಿ ದಸರಾ ಚಿತ್ರ ಹವಾ ಎಬ್ಬಿಸಿದೆ. ಕಲ್ಲಿದ್ದಲು ಗಣಿಯಲ್ಲಿರುವ ಹಳ್ಳಿಯೊಂದರಲ್ಲಿ ನಡೆಯುವ ಪಕ್ಕಾ ಮಾಸ್ ಆಕ್ಷನ್ ಪ್ಯಾಕ್ಡ್ ಕಥೆಯನ್ನು ಸಿನಿಮಾ ಹೊಂದಿದ್ದು, ಸಮುದ್ರಖನಿ, ಸಾಯಿ ಕುಮಾರ್, ಜರೀನಾ ವಹಾಬ್ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನೂ ‘ದಸರಾ’ ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದ್ದು, ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ದಸರಾ ಸಿನಿಮಾ ಮಾಸ್ ಅಂಡ್ ಆಕ್ಷನ್ ಸಿನಿಮಾ ಆಗಿದೆ. ತೆಲುಗು ಜೊತೆಗೆ ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದ್ದು, ನಾನಿ ಈ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಲಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ‘ಧೂಮ್ ಧಾಮ್ ಧೋಸ್ತಾನ್’ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದ್ದು, ಈ ಹಿಂದೆ ಕೀರ್ತಿ ಸುರೇಶ್ ‘ಧೂಮ್ ಧಾಮ್ ಧೋಸ್ತಾನ್’ ಹಾಡಿಗೆ ಮೈ ಚಳಿ ಬಿಡುವಂತೆ ಡ್ಯಾನ್ಸ್ ಮಾಡಿದ್ದರು. ಇನ್‌ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದರು. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಸಿನಿಪ್ರಿಯರ ಗಮನ ಸೆಳೆದಿದ್ದು, ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸತ್ಯನ್ ಸೂರ್ಯನ್ ಛಾಯಾಗ್ರಹಣ ಮಾಡುತ್ತಿದ್ದು, ನವಿನ್ ನೂಲಿ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್ ಸಿನಿಮಾಕ್ಕಿದೆ.

News Arrow ಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..