ನ್ಯೂಸ್ ಆ್ಯರೋ: ಚಿತ್ರನಟ ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ದಿನವೇ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ಆನಂದೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಹೊಸ ಆನಂದೂರು ಗ್ರಾಮದ ಹರೀಶ್ ಅವರ ಪುತ್ರ ಕಿರಣ್ (22) ಮೃತರು. ಅಪ್ಪು ಇಲ್ಲದ ಜೀವನ ಬೇಡವೆಂದು ನೊಂದುಕೊಂಡಿದ್ದ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಕಿರಣ್, ಗ್ರಾಮದಲ್ಲಿ ಶನಿವಾರ ನಡೆದ ತಮ್ಮ ನೆಚ್ಚಿನ ನಟನ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತಾವೇ ಮುಂದೆ ನಿಂತು ಆಯೋಜಿಸಿದ್ದರು. ಅನ್ನಸಂತರ್ಪಣೆ ಕೂಡ ನಡೆಸಿದ್ದ ಕಿರಣ್ ಕಾರ್ಯಕ್ರಮದ ಬಳಿಕ ಮನೆಗೆ ಬಂದು ‘ಅಪ್ಪು’ಗಾಗಿ ಕಣ್ಣೀರಾಕಿದ್ದ. ಬಳಿಕ ಮನನೊಂದು ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅ.28ರಂದು ತೆರೆಕಂಡ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ‘ಗಂಧದಗುಡಿ’ಯ 25 ಟಿಕೆಟ್‌ಗಳನ್ನು ತಂದು ಸ್ನೇಹಿತರಿಗೆ ಕಿರಣ್ ಹಂಚಿದ್ದರು. ಕೆಆರ್‌ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..