ಪಡ್ಡೆ ಹುಡುಗರ ನಿದ್ದೆಗೆಡಿಸಿದ ತುಪ್ಪದ ಬೆಡಗಿ ರಾಗಿಣಿ – ಮಿರಮಿರ ಮಿಂಚುವ ರಾಗಿಣಿಯ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಲ್ಲಿ ಹಲ್ ಚಲ್ ಎಬ್ಬಿಸಿದ ಡ್ರಗ್ಸ್ ಪ್ರಕರಣದಿಂದ ನಟಿ ರಾಗಿಣಿ ದ್ವಿವೇದಿ ಅದೆಷ್ಟೋ ಕರಾಳ ದಿನ ಅನುಭವಿಸಿದ್ದಾರೆ ಎಂದರೆ ತಪ್ಪಿಲ್ಲ. ಮಾದಕ ವಸ್ತು ಜಾಲದ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆದರೆ ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಮೊದಲಿನಂತೆ ತಮ್ಮ ಖುಷಿಖುಷಿಯ ಜೀವನದತ್ತ ಮರಳುತ್ತಿದ್ದು, ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಧ್ಯಕ್ಷ ಇನ್ ಅಮೆರಿಕಾ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದ ರಾಗಿಣಿ ಇದೀಗ ಮತ್ತೆ ನಟನೆಯಲ್ಲಿ ನಿರತರಾಗಿದ್ದಾರೆ.

ಇದೀಗ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಹಾಟ್ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡುತ್ತಿವೆ. ಸಾಕಷ್ಟು ಗ್ಯಾಪ್ ನಂತರ ಸ್ಯಾಂಡಲ್‌ವುಡ್‌ನಲ್ಲಿ ಸಕ್ರಿಯವಾಗಿರುವ ಹಾಟ್ ಬ್ಯೂಟಿ ಹೊಸದಾಗಿ ಫೋಟೋಶೂಟ್ ಮಾಡಿಸಿದ್ದು, ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸಿದೆ.
ಕೆಂಪೇಗೌಡ, ವೀರ ಮದಕರಿ, ಹೀಗೆ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟಿ ರಾಗಿಣಿ, ಸಿನಿಮಾಗಳ ವಿಚಾರವಾಗಿ ಅದೆಷ್ಟು ಸುದ್ದಿಯಾಗುತ್ತಾರೋ, ಅಷ್ಟೇ ಹಾಟ್ ಫೋಟೋಶೂಟ್‌ಗಳ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಸ್ವಿಮಿಂಗ್ ಪೂಲ್ ನಲ್ಲಿ ಬಿಕನಿ ತೊಟ್ಟು ಧರಿಸಿ ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಇನ್ನು ರಾಗಿಣಿಯ ಹಾಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ನಟಿ ರಾಗಿಣಿ ಇತ್ತೀಚಿಗಷ್ಟೆ ಶೇರ್ ಮಾಡಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸ್ವಿಮಿಂಗ್ ಪೂಲ್‌ನಲ್ಲಿ ಕೂಲ್ ಆಗಿರುವ ರಾಗಿಣಿ ಫೋಟೋಗಳು ಪಡ್ಡೆಯುವಕರ ನಿದ್ದೆ ಗೆಡಿಸಿದೆ. ಬಿಳಿ ಬಣ್ಣದ ಸ್ವಿಮ್ ಸೂಟ್‌ನಲ್ಲಿ ಮಿಂಚಿರುವ ರಾಗಿಣಿ ಫೋಟೋಗಳಿಗೆ ಅಭಿಮಾನಿಗಳಿಂದ ಲೈಕ್ಸ್ ಮತ್ತು ಕಾಮೆಂಟ್ಸ್ ಹರಿದುಬಂದಿವೆ.
ಇನ್ನೂ ಹಿಂದಿ, ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ತಯಾರಾಗುತ್ತಿರುವ ಸಾರಿ ಕರ್ಮ ರಿಟನರ್ಸ್ ಸಿನಿಮಾದಲ್ಲಿ ರಾಗಿಣಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಸಸ್ಪನ್ಸ್ ಮತ್ತು ಥ್ರಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಅವರು ವಿಶೇಷ ರೀತಿಯ ಪಾತ್ರಗಳನ್ನು ಮಾಡುತ್ತಿದ್ದಾರೆ.


ಸಾರಿ ಕರ್ಮ ರಿಟರ್ನ್ಸ್ ಸಿನಿಮಾದಲ್ಲಿ ತುಪ್ಪದ ಹುಡುಗಿ ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಈ ಸಿನಿಮಾ ಮೂಲಕ ಸಾರಿ ಮತ್ತು ಥ್ಯಾಂಕ್ಸ್ ಪದ ಮಹತ್ವ ಸಾರಲು ಮುಂದಾಗಿದ್ದಾರೆ ರಾಗಿಣಿ. ಬ್ರಹ್ಮ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಬಹುಭಾಷಾಯಲ್ಲಿ ರಿಲೀಸ್ ಆಗುತ್ತಿದೆ.