ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಅವರು ದಸರಾ ಹಬ್ಬದ ದಿನದಂದು ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ. ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್‌ನ ಮೊದಲ ಚಿತ್ರದ ಹೆಸರು ಘೋಷಣೆಯಾಗಿದ್ದು, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿನ ಪೋಸ್ಟರ್ವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಈ ಚಿತ್ರಕ್ಕೆ ಲೈಟರ್ ಬುದ್ಧ ಫಿಲ್ಮ್ಸ್ ಸಂಸ್ಥೆ ಸಹ ಹಣ ಹೂಡುತ್ತಿದೆ.
ಈ ಚಿತ್ರದ ತಾರಾಗಣದಲ್ಲಿ ರಾಜ್ ಬಿ. ಶೆಟ್ಟಿ ಹಾಗೂ ರಮ್ಯಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಕಥೆ, ನಿರ್ದೇಶನವನ್ನು ರಾಜ್ ಬಿ. ಶೆಟ್ಟಿ ಮಾಡುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ಅವರ ಗರುಡ ಗಮನ ವೃಷಭ ವಾಹನ ಚಿತ್ರದ ತಂಡವೇ ಇಲ್ಲಿ ಕೆಲಸ ಮಾಡಲಿದೆ ಎನ್ನಲಾಗುತ್ತಿದೆ.
ಮಿಥುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಸಂಗೀತವಿದ್ದು, ಚಿತ್ರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಕೊಡುವುದಾಗಿ ರಮ್ಯಾ ಹೇಳಿದ್ದಾರೆ.
ಎಲ್ಲರಿಗೂ ಶುಭವ ತರಲಿ ವಿಜಯದಶಮಿ ಎಂದು ವಿಶ್ ಮಾಡಿರುವ ಪದ್ಮಾವತಿ ಅಂತೂ ಇಂತೂ ಸ್ಯಾಂಡಲ್ ವುಡ್ ಗೆ ಮರಳುವ ಊಹಾಪೋಹಗಳನ್ನು ನಿಜವಾಗಿಸಿದ್ದು, ರಾಜ್ ಬಿ ಶೆಟ್ಟಿ, ರಮ್ಯಾ ಜೋಡಿಯನ್ನು ತೆರೆಯಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..