ನ್ಯೂಸ್ ಆ್ಯರೋ : ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್ ನಟನೆಯನ್ನು ಕೊಂಡಾಡಿದ್ದಾರೆ.
ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿದ್ದು,
‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ಎಂದ ಅವರು ಈ ಚಿತ್ರ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ.
News Arrowಸಮಗ್ರ ವಿವರಣೆ, ನೈಜ ಸುದ್ದಿ ಹಾಗೂ ವರ್ತಮಾನ ವಿದ್ಯಮಾನಗಳ ನೇರ ಹಾಗೂ ನಿಷ್ಠುರ ವಿಶ್ಲೇಷಣೆ ನೀಡುವ ವರದಿಗಾರರನ್ನೊಳಗೊಂಡ ತಂಡ ನ್ಯೂಸ್ ಆ್ಯರೋ.ಇನ್. ಸ್ಥಳೀಯ ವಿಷಯಗಳು ಅಥವಾ ಕಾರ್ಯಕ್ರಮಗಳ ವಸ್ತುನಿಷ್ಠ ವರದಿಯ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗೂ ರಾಜ್ಯದ ಯಾವುದೇ ಸುದ್ದಿಗಳನ್ನು ಓದುಗ ಮಿತ್ರರಿಗೆ ಯಥಾವತ್ತಾಗಿ ತಲುಪಿಸುವ ವಿಭಿನ್ನ ಪ್ರಯತ್ನ ನಮ್ಮದು..